UK Suddi
The news is by your side.

ಬಂಡಾಯ ಶಾಸಕರ ಅನರ್ಹತೆಗೆ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.

ಬೆಂಗಳೂರು:ವಿಪ್ ಉಲ್ಲಂಘಿಸಿರುವ ಕಾಂಗ್ರೆಸ್ಸ್ ಪಕ್ಷದ ನಾಲ್ವರು ಅತೃಪ್ತ ಶಾಸಕರನ್ನು ಪಕ್ಷಾಂತರ ಕಾಯ್ದೆ ಅಡಿಯಲ್ಲಿ ಅನರ್ಹ ಮಾಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರದಂದು ಸ್ಪೀಕರ್‌ ರಮೇಶ್‌ಕುಮಾರ್‌ ಅವರಿಗೆ ದೂರು ಸಲ್ಲಿಸಿದರು.

ಗೋಕಾಕ್ MLA, ಮಹೇಶ ಕುಮಠಳ್ಳಿ, ಬಿ.ನಾಗೇಂದ್ರ ಹಾಗೂ ಡಾ. ಉಮೇಶ್ ಜಾಧವ್ ಅವರಿಗೆ ಎರಡೆರಡು ಬಾರಿ ಶೋಕಾಸ್ ನೋಟಿಸ್ ಹಾಗೂ ವಿಪ್ಗಳನ್ನು ಜಾರಿ ಮಾಡಿದ್ದರೂ ಅದ್ಯಾವುದಕ್ಕೆ ಕ್ಯಾರೆ ಅಂದಿರಲಿಲ್ಲ.
ಹೀಗಾಗಿ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲ ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಇದ್ದರು.