UK Suddi
The news is by your side.

ಮಹೇಶ ಕುಮಠಳ್ಳಿ ನಾಪತ್ತೆ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್..!!

ಬೆಂಗಳೂರು: ಅಥಣಿ ಶಾಸಕ ಮಹೇಶ ಕುಮಠಳ್ಳಿ ನಾಪತ್ತೆ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಈ ಸಂಬಂಧ ಗೋಕಾಕ ಶಾಸಕ ಮತ್ತು ಸರಕಾರಕ್ಕೆ ನೋಟೀಸ್ ಜಾರಿಗೊಳಿಸಿರುವ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠವು, ಕುಮಠಳ್ಳಿ ಎಲ್ಲಿದ್ದಾರೆ ಎಂದು ತನಿಖೆ ನಡೆಸುವಂತೆಯೂ ಸೂಚನೆ ನೀಡಿದೆ.

ಶಾಸಕ ಮಹೇಶ ಕುಮಠಳ್ಳಿ ಅವರನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ ಅಕ್ರಮ ಬಂಧನದಲ್ಲಿರಿಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ ವಿಭಾಗೀಯ ಪೀಠವು ನೋಟೀಸ್ ಜಾರಿಗೊಳಿಸಿ ಮುಂದಿನ ವಿಚಾರಣೆ ದಿನಾಂಕವನ್ನು ಫೆಬ್ರುವರಿ 20 ಕ್ಕೆ ನಿಗದಿಗೊಳಿಸಿತು.