UK Suddi
The news is by your side.

ಹೋಟೆಲ್ ನಲ್ಲಿ ಅಗ್ನಿ ಅವಗಡ: 17 ಜನರ ದುರ್ಮರಣ.

ಹೊಸದಿಲ್ಲಿ: ದೆಹಲಿಯ ಕರೋಲ್ ಭಾಗ್ ನ ಹೋಟೆಲ್ ಅರ್ಪಿತ್ ಪ್ಯಾಲೇಸ್ ನಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ದುರಂತದಲ್ಲಿ ಮಗು ಸೇರಿ 17 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಯರು , ಪುರುಷರು ಮತ್ತು ಒಂದು ಮಗು ಸೇರಿ 17 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಮೂಲಗಳು ತಿಳಿಸಿವೆ.

ಸುಮಾರು 40 ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments