UK Suddi
The news is by your side.

VTU ವಿಭಜನೆ ಮಾಡುವ ಕ್ರಮ ಸರ್ಕಾರ ಕೈಬಿಡಲಿ: ಮಾಜಿ ಸಚಿವ ರಾಯರೆಡ್ಡಿ ಒತ್ತಾಯ.

ಬೆಳಗಾವಿ: ಸ್ಥಳೀಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ವಿಭಜನೆ ಮ ಕ್ರಮವನ್ನು ಸರ್ಕಾರ ಕೈ ಬಿಡಬೇಕೆಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿಭಜನೆ ಮಾಡುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.

ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರೇವಣ್ಣ ವಿಟಿಯು ಕ್ಯಾಂಪಸ್‌ನಲ್ಲಿ ಉಳಿದುಕೊಂಡಿದ್ದರು. ಈಗ ಅದೇ ವಿಟಿಯು ವಿಭಜಿಸಿ ಹಾಸನಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ಮಾಡಿದ್ದಾರೆ ಎಂದು ರಾಯರೆಡ್ಡಿ ಆರೋಪಿಸಿದರು.

Comments