UK Suddi
The news is by your side.

ತಮ್ಮ ಹುಟ್ಟುಹಬ್ಬ ದಿನವನ್ನು ಕ್ಷೇತ್ರದ ಜನತೆಗೆ ಮೀಸಲಿಟ್ಟ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ.

ಬೆಳಗಾವಿ: ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಅವರ ಹುಟ್ಟು ಹಬ್ಬ ನಾಳೆ (ಫೆ.14) ರಂದು ಇದ್ದು ಆದರೆ ಶಾಸಕಿ ಹೆಬ್ಬಾಳ್ಕರ ಅವರೆ ತಮ್ಮ ಹುಟ್ಟುಹಬ್ಬವನ್ನು ಮೇ 12 ಕ್ಕೆ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಮೇ 12 ಬೆಳಗಾವಿ ಗ್ರಾಮೀಣ ಕ್ಷೇತ್ರದ ಮತದಾರರು ನನಗೆ ರಾಜ್ಯ ರಾಜಕೀಯ ರಂಗದಲ್ಲಿ ಮರುಜನ್ಮ ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಿ ವಿಧಾನಸಭೆಗೆ ಕಳಿಸಿದ್ದು ನನ್ನ ಜೀವನದಲ್ಲಿ ಎಂದೂ ಮರೆಯಲಾಗದ ದಿನ ಮೇ 12 ಆದ್ದರಿಂದ ಅದೇ ದಿನ ನನ್ನ ಹುಟ್ಟು ಹಬ್ಬವನ್ನು ಅಭಿಮಾನಿಗಳ, ಕಾರ್ಯಕರ್ತರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ತಮ್ಮ ಬೆಂಬಲಿಗರಲ್ಲಿ ಹೇಳಿಕೊಂಡಿದ್ದಾರೆಂದು ಎಂದು ತಿಳಿದು ಬಂದಿದೆ.

Comments