ರಾಜಭವನಕ್ಕೆ ಬಿಜೆಪಿ ನಿಯೋಗ ದೌಡು.
ಬೆಂಗಳೂರು: ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ದಾಳಿ ಖಂಡಿಸಿ ಇಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ರಾಜಭವನಗೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.
ಇಲ್ಲಿನ ವಿಧಾನ ಸೌಧದಿಂದ ರಾಜಭವನದವೆರೆಗೆ ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಕುಟುಂಬದ ವಿರುದ್ಧ ಬಿಜೆಪಿ ಶಾಸಕ ಪ್ರೀತಂ ಗೌಡ ಆಕ್ಷೇಪಾರ್ಹ ಟಿಪ್ಪಣಿ ಮಾಡಿದ್ದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಶಾಸಕರ ಮೆನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗದ್ದಲ ಉಂಟಾಗಿ ಕಲ್ಲೂ ತೂರಾಟವಾಗಿದೇ.
ಸಿಎಂ ಕುಮಾರಸ್ವಾಮಿ ಈಗಾಗಲೇ ತನಿಖೆಗೆ ಆದೇಶಿಸಿದ್ದು ತಪ್ಪಿತಸ್ಥರ್ ವಿರುದ್ಧ ಕ್ರಮ ಜರುಗಿಸಲು ಸೂಚಿಸಿದ್ದಾರೆ.