UK Suddi
The news is by your side.

ಇಂದು ಇಂಡೋ ಆಸೀಸ್ ಫೈನಲ್ ಫೈಟ್:ಉಭಯ ತಂಡಗಳಿಗೆ ಸರಣಿ ಜಯದತ್ತ ಚಿತ್ತ.

ನವದೆಹಲಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟೂರ್ನಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ನೀಡಿದ್ದು,ಐದು ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ತಲಾ ಎರಡೆರಡು ಪಂದ್ಯ ಗೆದ್ದಿದ್ದರಿಂದ, ಕೊನೆಯ ಪಂದ್ಯ ರೋಚಕತೆ ಹುಟ್ಟಿಸಿದೆ. ಬುಧವಾರದ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬ್ಯಾಟಿಂಗ್ ಹಾಗೂ ಬಾಲ್ಲಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದು,ಯಾವ ತಂಡವನ್ನು ಕಡೆಗಣೆಸುವಂತಿಲ್ಲ.ನಾಲ್ಕನೇ ಏಕದಿನ ಪಂದ್ಯದಲ್ಲಿ ಸವಾಲಿನ ಮೊತ್ತ ಬೆನ್ನು ಹತ್ತಿ ಗೆದ್ದ ಆಸ್ಟ್ರೇಲಿಯಾ, ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಐದನೇ ಏಕದಿನ ಪಂದ್ಯ ಗೆದ್ದು ಟೀಮ್ ಇಂಡಿಯಾ ಸರಣಿ ಕೈ ವಶ ಮಾಡಿಕೊಳ್ಳುವ ಲೆಕ್ಕಾಚಾರ ಹಾಕಿಕೊಂಡಿದೆ.

ಟೀಮ್ ಇಂಡಿಯಾದ ಸ್ಟಾರ್ ಆರಂಭಿಕರು ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು,ಸ್ಟಾರ್ ಆರಂಭಿಕರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ನೆರವಾಗಿದ್ದಾರೆ. ರೋಹಿತ್ ಶರ್ಮಾ ಶತಕದ ಅಂಚಿನಲ್ಲಿ ಎಡವಿದರೆ, ಗಬ್ಬರ್ 17 ಇನ್ನಿಂಗ್ಸ್ ಬಳಿಕ ಮೂರಂಕಿ ಮುಟ್ಟಿದರು.

ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಬಹುವಾಗಿ ಕಾಡಿದ್ದು, ಬೌಲಿಂಗ್ ವಿಭಾಗ. ಬಲಿಷ್ಠ ಬೌಲಿಂಗ್ ಹೊಂದಿರುವ ವಿರಾಟ್ ಪಡೆಯ ಸ್ಟಾರ್ ಬೌಲರ್ ಗಳು ಮೊಹಾಲಿಯಲ್ಲಿ ರನ್ ನೀಡಿ ಕೈ ಸುಟ್ಟುಕೊಂಡಿದ್ದರು. ಇನ್ನು ಯಾರ್ಕರ್ ಸ್ಪೆಷಲ್ಟ್‌ ಜಸ್ಪ್ರಿತ್ ಬೂಮ್ರಾ ಹಾಗೂ ಭುವನೇಶ್ವರ್ ಕುಮಾರ್ ತಮ್ಮ ಶಿಸ್ತುಬದ್ಧ ದಾಳಿಯನ್ನು ಸಂಘಟಿಸಬೇಕಿದೆ.

ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್ ರಾಹುಲ್ ತಂಡಕ್ಕೆ ಬಲ ತುಂಬಬಲ್ಲ ಆಟಗಾರರು. ತವರಿನ ಅಂಗಳದಲ್ಲಿ ಪಂದ್ಯ ನಡೆಯುವುದರಿಂದ ಚೇಸಿಂಗ್ ಸ್ಟಾರ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಯುವ ವಿಕೆಟ್ ಕೀಪರ್ ರಿಷಭ್ ಪಂತ್ ತಾವಾಡಿ ಬೆಳೆದ ಅಂಗಳದಲ್ಲಿ ಹೇಗೆ ಆಡುತ್ತಾರೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ. ಆಲ್‌ರೌಂಡರ್‌ಗಳು ತಮ್ಮ ಘನತೆಗೆ ತಕ್ಕ ಆಟವಾಡಿದರೆ, ಗೆಲುವಿನ ಮಾಲೆಯನ್ನು ತೊಡಬಹುದು.

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರು ಲಯಕ್ಕೆ ಮರಳಿರುವುದು ತಂಡಕ್ಕೆ ಆನೆ ಬಲ ತಂದಿದೆ. ನಾಯಕ ಆ್ಯರೋನ್ ಫಿಂಚ್ ಹಾಗೂ ಉಸ್ಮಾನ್ ಖವಾಜ ತಂಡಕ್ಕೆ ಉತ್ತಮ ಆರಂಭ ನೀಡಬಲ್ಲರು. ಮಧ್ಯಮ ಕ್ರಮಾಂಕದಲ್ಲಿ ಶಾನ್ ಮಾರ್ಶ್, ಪೀಟರ್ ಹ್ಯಾ್ಂಸ್ಕಾಂಬ್, ಗ್ಲೇನ್ ಮ್ಯಾಕ್ಸ್ ವೆಲ್‌ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬಲ್ಲರು. ಕಳೆದ ಪಂದ್ಯದ ಮ್ಯಾಚ್ ಟರ್ನ್ ಮಾಡಿದ ಆ್ಯಷ್ಟನ್ ಟರ್ನರ್ ಅವರ ಮೇಲೆ ಎಲ್ಲರ ಗಮನ ಹರಿಸಿದ್ದಾರೆ.

ಪ್ರವಾಸಿ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಿದೆ. ಟೀಮ್ ಇಂಡಿಯಾ ವಿಶ್ವಕಪ್‌ಗೂ ಮುನ್ನ ಸರಣಿ ಗೆಲುವಿನ ಸಿಹಿ ಅನುಭವಿಸುತ್ತದಾ ಎಂಬ ಲೆಕ್ಕಾಚಾರಗಳು ಶುರುವಾಗಿದೆ.

ಸಮಯ: ಮಧ್ಯಾಾಹ್ನ 01:30

Comments