UK Suddi
The news is by your side.

ಉತ್ತಮ ಮತದಾನ ಪ್ರಮಾಣ ದಾಖಲಿಸಲು ಪ್ರತಿಯೊಬ್ಬರು ಶ್ರಮಿಸಿ:ತಹಶೀಲ್ದಾರ ಅಶೋಕ ಶಿಗ್ಗಾಂವಿ.

ಕಲಘಟಗಿಯಲ್ಲಿ ಮತದಾರರ ಜಾಗೃತಿಗಾಗಿ ಬೈಕ್ ರ‍್ಯಾಲಿ

ಧಾರವಾಡ:ಲೋಕಸಭಾ ಚುನಾವಣೆಗೆ ಮತದಾರರ ಜಾಗೃತಿಗಾಗಿ ಕಲಘಟಗಿ ಪಟ್ಟಣದಲ್ಲಿ ಗುರುವಾರದಂದು ಪಟ್ಟಣ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮತದಾರರ ಜಾಗೃತಿಗಾಗಿ ಬೈಕ್ ರ‍್ಯಾಲಿ ನಡೆಯಿತು.

ಪಟ್ಟಣ ಪಂಚಾಯತ್ ಆವರಣದಲ್ಲಿ ತಹಶೀಲ್ದಾರ ಅಶೋಕ ಶಿಗ್ಗಾಂವಿ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಬರುವ ಲೋಕಸಭಾ ಚುನಾವಣೆಗೆ ಎಪ್ರಿಲ್ 23 ರಂದು ಮತದಾನ ನಡೆಯಲಿದೆ. ಕಲಘಟಗಿ ವಿಧಾನಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು.ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ ಹೇಳಬೇಕು. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಬಳಕೆ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲ ಮತಗಟ್ಟೆ ವ್ಯಾಪ್ತಿಗಳಲ್ಲಿ ಆಯೋಜಿಸಬೇಕು ಎಂದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಶೇಖರ್, ಕ್ಷೆತ್ರಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ, ಶಿಕ್ಷಣ ಸಮನ್ವಯಾಧಿಕಾರಿ ಮಹಾವೀರ ಹಂಚಿನಾಳ, ಎಸ್.ಎ. ಚಿಕ್ಕನರ್ತಿ ಹಾಗೂ ಮತ್ತಿತರರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

Comments