UK Suddi
The news is by your side.

ತಿಲಾರಿ ಡ್ಯಾಂನಲ್ಲಿ ಮುಳುಗಿದ ವಿದ್ಯಾರ್ಥಿ, ಮೃತ ದೇಹಕ್ಕಾಗಿ ಶೋಧಕಾರ್ಯ

ಬೆಳಗಾವಿ: ತಿಲಾರಿ ಡ್ಯಾಂಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳಲ್ಲಿ ಬೆಳಗಾವಿಯ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿದ್ದಾನೆ. ಅರಣ್ಯ, ಪೊಲೀಸ್ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ದೇಹಕ್ಕಾಗಿ ಶೋಧ ನಡೆಸಿದ್ದಾರೆ. ವಿನಯ ಸಂಜಯ ಕಾಂಬಳೆ(18) ಎಂದು ಗುರುತಿಸಲಾಗಿದೆ.

ಮಹಾನಗರ ಪಾಲಿಕೆ ಎಂಜಿನೀಯರ್ ಲಕ್ಷ್ಮೀ ನಿಪ್ಪಾಣಿಕರ ಅವರ ಸಂಬಂಧಿ ಬಾಲಕ ಎಂದು ಗುರುತಿಸಲಾಗಿದೆ. ನಗರದ ಲಿಂಗರಾಜ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಮೊದಲ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ, ಪರೀಕ್ಷೆ ಮುಗಿದ ಖುಷಿಯಲ್ಲಿ ತೆರಳಿದ್ದರು ಎನ್ನಲಾಗಿದೆ.

Comments