UK Suddi
The news is by your side.

ಮಾತೆ ಮಹಾದೇವಿ ನಿಧನಕ್ಕೆ ಸಿಎಂ ಸಂತಾಪ.

ಬೆಂಗಳೂರು:ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಲಿಂಗಾಯತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಮಾತೆ ಮಹಾದೇವಿ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತವರ್ಗಕ್ಕೆ ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸ್ಮರಿಸಿದ್ದಾರೆ.

Comments