UK Suddi
The news is by your side.

ಬಿಗ್ ಬ್ರೆಕಿಂಗ್: ಮಾಜಿ‌ ಸಚಿವ ಎ.ಮಂಜು ಬಿಜೆಪಿ ಸೇರ್ಪಡೆ ಸಾಧ್ಯತೆ.

ಬೆಂಗಳೂರು: ಹಾಸನದ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಇಂದು ಬೆಂಗಳೂರಿನ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಮಂಜು ಅವರು ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಕರೆದೊಯುತ್ತಾರೆ ಎಂಬ ಮಾತುಗಳೂ ಕೇಳಿ ಬರ್ತಿವೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜ್ ಕೂಡ ಕಾಂಗ್ರೆಸ್ಗೆ ಗುಡ್ ಬೈ ಸಾಧ್ಯತೆ ಇದೆ. ನಿನ್ನೆ ನಡೆದ ಮಂಜು ಅಭಿಮಾನಿಗಳ ಸಭೆಯಲ್ಲಿ ಜಿ.ಪಂ ಅಧ್ಯಕ್ಷೆ ಶ್ವೇತ ಅವರೂ ಭಾಗವಹಿಸಿದ್ದರು. ಕಾಂಗ್ರೆಸ್ನ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ಕಾಂಗ್ರೆಸ್ ಬಿಡಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿದೆ.

Comments