UK Suddi
The news is by your side.

ಬೆಳಗಾವಿ ಲೋಕಸಭಾ ಟಿಕೆಟ್ ನಯವಾಗಿ ನಿರಾಕರಿಸಿದ: ಶಾಸಕಿ ಅಂಜಲಿ ನಿಂಬಾಳ್ಕರ್

ಬೆಳಗಾವಿ: ಖಾನಾಪೂರ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸದೀಯ ಕಾರ್ಯದರ್ಶಿ ಶಾಸಕಿ ಅಂಜಲಿ ನಿಂಬಾಳ್ಕರ್ ಬೆಳಗಾವಿ ಲೋಕಸಭಾ ಟಿಕೆಟ್ ಅನ್ನು ನಯವಾಗಿ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಬೆಳಗಾವಿ ಕ್ಷೇತ್ರಕ್ಕೆ ಡಾ. ಅಂಜಲಿ ನಿಂಬಾಳ್ಕರ್ ರವರ ಹೆಸರನ್ನು ಸೂಚಿಸಿದರು.

ಆದರೆ ಸಂಸದೀಯ ಕಾರ್ಯದರ್ಶಿ ಶಾಸಕಿ ಅಂಜಲಿ ನಿಂಬಾಳ್ಕರ್ “ಖಾನಾಪೂರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದೇನೆ, ಅದಕ್ಕೆ ನಾನು ಕಟಿಬದ್ದವಾಗಿದ್ದೇನೆ ನನ್ನ ಕ್ಷೇತ್ರ ಅಭಿವ್ರಿದ್ಧಿ ನೇ ನನ್ನ ಆಧ್ಯ ಗುರಿ ಎಂದು ನುಡಿದಿದ್ದಾರೆ ಎಂದು ಹೇಳಲಾಗುತ್ತದೆ.

ಈ ಕಾರಣಕ್ಕಾಗಿ ಸಭೆಯಲ್ಲಿ ಹಾಜರಿದ್ದ ಶಾಸಕಾಂಗ ಪಕ್ಷದ ನಾಯಕರು ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಮ್ಮುಖದಲ್ಲಿ ತಮಗೆ ಒದಗಿ ಬಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಯವಾಗಿ ನಿರಾಕರಿಸಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.

Comments