UK Suddi
The news is by your side.

ಲಾರಿ ಡಿಕ್ಕಿ: ಓರ್ವ ಪಾದಚಾರಿ ಸಾವು.

ಚಿಕ್ಕೋಡಿ: ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.

ನಾಗರ ಮುನ್ನೋಳ್ಳಿ ಗ್ರಾಮದ ಶ್ರೀಕಾಂತ ಚೌಗಲಾ(70) ಮೃತ ವ್ಯಕ್ತಿ. ಪಟ್ಟಣದ ಆಸ್ಪತ್ರೆಗೆ ಆಗಮಿಸಿದ್ದರು ಎನ್ನಲಾಗಿದ್ದು, ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಸೊಂಟ ಮತ್ತು ಕಾಲಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾನೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕೋಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments