UK Suddi
The news is by your side.

SSLC ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ಝೆರಾಕ್ಸ್ ಕೇಂದ್ರಗಳ ನಿರ್ವಹಣೆಗೆ ನಿರ್ಭಂಧನೆ.

ಧಾರವಾಡ: ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಪರೀಕ್ಷೆಯ ವೇಳಾಪಟ್ಟಿಗೆ ಅನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯೊಳಗಿನ ಎಲ್ಲ ಝೆರಾಕ್ಸ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ಮಾತ್ರ ಕಾರ್ಯನಿರ್ವಹಿಸದಂತೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ವೇಳಾ ಪತ್ರಿಕೆಗೆ ಅನುಗುಣವಾಗಿ ಆಯಾ ದಿವಸದ ಬೆಳಗಿನ 9.30 ಗಂಟೆಯಿಂದ 12.45 ಗಂಟೆಯವರೆಗೆ ಮತ್ತು ಅಪರಾಹ್ನದ 2 ಗಂಟೆಯಿಂದ 5.15 ಗಂಟೆಯವರೆಗೆ ಪರೀಕ್ಷಾ ಸಮಯದಲ್ಲಿ ಮಾತ್ರ ನಿರ್ಭಂಧಿತ ಪ್ರದೇಶದ ಝೆರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸದಂತೆ ಬಂದ್ ಮಾಡಿಸಲು ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Comments