UK Suddi
The news is by your side.

SSLC ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿರ್ಭಂಧಿತ ಪ್ರದೇಶ ಘೋಷಣೆ:ಜಿಲ್ಲಾಧಿಕಾರಿ ಆದೇಶ.

ಧಾರವಾಡ:ಇದೇ ತಿಂಗಳ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯನ್ನು ಹೊರತುಪಡಿಸಿ) ಇರುವ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಈ ಘೋಷಿತ ಆದೇಶವು ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ಪರೀಕ್ಷಾ ಸಮಯದಲ್ಲಿ ಜಾರಿಯಲ್ಲಿದ್ದು, ನಿರ್ಭಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಆದೇಶವು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.

Comments