UK Suddi
The news is by your side.

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಡಾ.ಮಹೇಶ ನಾಲವಾಡ.

ಹುಬ್ಬಳ್ಳಿ:ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಹಾಗೂ ಧಾರವಾಡ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಮಹೇಶ ನಾಲವಾಡ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಇಷ್ಟು ವರ್ಷ ಪಕ್ಷ ತಮಗೆ ಅವಕಾಶ ಕಲ್ಪಿಸಿದಕ್ಕೆ ಚಿರ ಋಣಿ ಎಂದು ತಿಳಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿದ್ದ ಅವರು ಕಳೆದೆರಡು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾಗಿದ್ದ ಅವರು ಹುಬ್ಬಳ್ಳಿ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಎದುರು ಎರಡು ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಅವರು ಜಿಲ್ಲೆಯ ಪಕ್ಷದ ಮುಖಂಡರ ವರ್ತನೆಯಿಂದ ಬೇಸತ್ತು ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಕೊನೆ ಗಳಿಗೆಯಲ್ಲಿ ಅವರಿಗೆ ಲೋಕಸಭಾ ಟಿಕೇಟ್ ಕೈ ತಪ್ಪಿಸಿದ ಹಿನ್ನೆಲೆಯಲ್ಲಿ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂದು ಮಾತುಗಳು ಕೇಳಿಬರುತ್ತಿವೆ.

Comments