UK Suddi
The news is by your side.

ದೇವೇಗೌಡರ ಪರಮಾಪ್ತ ಡ್ಯಾನಿಶ್ ಅಲಿ ಬಿಎಸ್‌ಪಿಗೆ ಸೇರ್ಪಡೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪರಮಾಪ್ತ ಹಾಗೂ ಜನತಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಎಸ್‌ಪಿಗೆ ಸೇರ್ಪಡೆಯಾಗಿದ್ದಾರೆ. ಬಹುಜನ ಸಮಾಜ ಪಕ್ಷದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರ ಅವರ ಸಮ್ಮುಖದಲ್ಲಿ ಡ್ಯಾನಿಶ್ ಅಲಿ ಬಿಎಸ್ಪಿಗೆ ಸೇರ್ಪಡೆಯಾಗಿದ್ದಾರೆ. ನಂತರ ಬಿಎಸ್ಪಿ ವರಿಷ್ಠೆ ಮಾಯಾವತಿಯವರು ಡ್ಯಾನಿಶ್ ಅಲಿ ಅವರನ್ನು ಸ್ವಾಗತಿಸಿದ್ದಾರೆ.

ರಾಜ್ಯದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸದಸ್ಯರಾಗಿದ್ದ ಅವರು, ಕರ್ನಾಟಕ ಕಾಂಗ್ರೆಸ್ ಜೆಡಿಎಸ್‌ ಸೀಟು ಹಂಚಿಕೆ ಬಗ್ಗೆ ರಾಹುಲ್ ಗಾಂಧಿಯವರ ಜೊತೆ ಮಾತುಕತೆ ನಡೆಸಿ ಸೀಟು ಹಂಚಿಕೆ ಅಂತಿಮಗೊಳಿಸಿದ್ದರು.

ಉತ್ತರಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವ ಸಾಧ್ಯತೆಗಳಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ.

Comments