UK Suddi
The news is by your side.

ಬಾಗಿದ ವಿದ್ಯುತ್ ಕಂಬಗಳು: ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಹೆಸ್ಕಾಂ..!!

ರಾಮದುರ್ಗ: ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ವರ್ಷಗಳಿಂದ ಕಬ್ಬಿಣದ ವಿದ್ಯುತ್ ಕಂಬ ಬಾಗಿದ್ದು, ದೊಡ್ಡ ಅವಘಡ ನಡೆಯುವ ಮುನ್ನ ಹೆಸ್ಕಾಂ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ.

ಪಟ್ಟಣದ ಬಾಣಕಾರ ಪೇಟೆ ಸದಾ ಜನಜಂಗುಳಿ ಇರುವ ರಸ್ತೆ ಯಾಗಿದ್ದು, ಕಬ್ಬಿಣದ ಹಳೆಯ ಕಂಬ ಇಲ್ಲಿ ಬಾಗಿ ನಿಂತಿದೆ ಇಂದು ನಾಳೆ ಬೀಳುವ ಸ್ಥಿತಿಯಲ್ಲಿದ್ದು, ಸುತ್ತಲಿನ ನಿವಾಸಿಗಳು ತೀವ್ರ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ಬಗ್ಗೆ ಹೆಸ್ಕಾಂ ಇಲಾಖೆಗೆ ಸಾಕಷ್ಟು ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.

ಕಳೆದ ತಿಂಗಳು ಇಲ್ಲಿನ ನಿವಾಸಿಗಳು ತಹಶೀಲ್ದಾರ್, ಪುರಸಭೆ ಹಾಗೂ ಹೆಸ್ಕಾಂ ಕಛೇರಿಗೆ ಲಿಖಿತ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ತಹಶೀಲ್ದಾರ್ ಕಚೇರಿಯಿಂದ ಕೆಇಬಿ ಇಲಾಖೆಗೆ ಸೂಚನೆ ನೀಡಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿ ತಿಂಗಳು ಕಳೆದರೂ ಇನ್ನೂ ಕಾರ್ಯ ಕೈಗೆತ್ತಿಕೊಂಡಿಲ್ಲ. ಇದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಇನ್ನಾದರೂ ಹೆಸ್ಕಾಂ ಇಲಾಖೆ ಎಚ್ಚೆತ್ತುಕೊಂಡು. ಬಾಗಿದ ವಿದ್ಯುತ್ ಕಂಬಗಳವನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಹಾಕಿ ಸಾರ್ವಜನಿಕರಿಗೆ ಇರುವ ಆತಂಕವನ್ನು ದೂರ ಮಾಡಬೇಕಿದೆ.

Comments