UK Suddi
The news is by your side.

ಬ್ರೆಕಿಂಗ್: ಗೋವಾ ಸಿ.ಎಂ ಮನೋಹರ್ ಪರಿಕರ್ ವಿಧಿವಶ.

ಪಣಜಿ(ಗೋವಾ): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ರಕ್ಷಣಾ ಸಚಿವರು ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ (63) ಇಂದು ಸಂಜೆ ವಿಧಿವಶಯಾಗಿದ್ದಾರೆ.

ಮನೋಹರ್ ಪರಿಕರ್ ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿದ್ದರು. ಮೆದೋಜೀರಕ ಗೃಂಥಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.

ಕಳೆದ ವರ್ಷ ಅಮೆರಿಕದಲ್ಲಿ ಮೂರು ತಿಂಗಳಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಗೋವಾಕ್ಕೆ ಮರಳಿದ್ದರು ಗೋವಾ, ಮುಂಬೈ, ನವದೆಹಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರ ಮೂಗಿಗೆ ಪೈಪ್ ಅಳವಡಿಸಲಾಗಿತ್ತು. ಹಾಗಿದ್ದರೂ ಕೂಡ ಬಜೆಟ್ ಅಧಿವೇಶದಲ್ಲಿ ಭಾಗವಹಿಸಿ ಬಜೆಟ್ ಮಂಡನೆ ಮಾಡಿದ್ದರು.

Comments