UK Suddi
The news is by your side.

ಸಾಲುಮರದ ತಿಮ್ಮಕ್ಕಗೆ ಪದ್ಮಶ್ರೀ ಪ್ರಶಸ್ತಿ ಪ್ರಧಾನ.

ನವದೆಹಲಿ: ಹೆಸರಾಂತ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆಗೈದ 47 ಖ್ಯಾತನಾಮರಿಗೆ ರಾಷ್ಟ್ರಪತಿ ಪದ್ಮಶ್ರೀ ಪ್ರಶಸ್ತಿಗಳನ್ನ ನೀಡಿ ಗೌರವಿಸಿದರು.

ಪರಿಸರವಾದಿ ಸಾಲುಮರದ ತಿಮ್ಮಕ್ಕ, ಕ್ರಿಕೆಟಿಗ ಗೌತಮ್ ಗಂಭೀರ್, ವಿಜ್ಞಾನಿ ನಂಬಿ ನಾರಾಯಣ್ ಸೇರಿದಂತೆ ಒಟ್ಟು 47 ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Comments