UK Suddi
The news is by your side.

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಕ್ರಿಕೆಟಿಗ ಗೌತಮ್ ಗಂಭೀರ್.

ನವದೆಹಲಿ:ಭಾರತದ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್ ಹೀರೋ ಗೌತಮ್ ಗಂಭೀರ್ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ಕೇಂದ್ರ ಕಚೇರಿಗೆ ತೆರಳಿದ ಗಂಭೀರ್ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.

ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಗಂಭೀರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.ಸ್ಪರ್ದಿಸುತ್ತಾರೋ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.

Comments