UK Suddi
The news is by your side.

ಇಂದು ಗೋಕಾಕಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮನ.

ಗೋಕಾಕ: ಬೆಳಗಾವಿ ಲೋಕಸಭಾ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಡಾ. ವ್ಹಿ ಎಸ್ ಸಾಧುನವರ ಪರ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ.

ಇಂದು ಸಂಜೆ 8 ಗಂಟೆಗೆ ನಗರದ ಫಾಲ್ಸ್ ರಸ್ತೆಯಲ್ಲಿರುವ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಸಾರ್ವಜನಿಕರನ್ನು ಉದ್ಧೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಅಭ್ಯರ್ಥಿ ಡಾ. ವ್ಹಿ ಎಸ್ ಸಾಧುನವರ ಆಗಮಿಸಲಿದ್ದಾರೆ. ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರದ ಎಲ್ಲ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

Comments