UK Suddi
The news is by your side.

ಬೆಳಗಾವಿಗೆ ರಾಹುಲ್ ಗಾಂಧಿ ಆಗಮನ, ರಾಯಚೂರಿನತ್ತ ಪ್ರಯಾಣ.

ಸಾಂಬ್ರಾ (ಬೆಳಗಾವಿ): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಇಲ್ಲಿಂದ ರಾಹುಲ್ ಹೆಲಿಕಾಪ್ಟರ್ ಮೂಲಕ ರಾಯಚೂರಿಗೆ ತೆರಳಲಿದ್ದು, ಅಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದ ನಂತರ ರಾಹುಲ್ ಚಿಕ್ಕೋಡಿಯಲ್ಲಿ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ರಾಜ್ಯ ನಾಯಕರಾದ ಕೆ.ಎಚ್. ಮುನಿಯಪ್ಪ, ವೀರಪ್ಪ ಮೊಯ್ಲಿ, ದಿನೇಶ ಗುಂಡೂರಾವ್, ಬೆಳಗಾವಿ ಲೋಕಸಭಾ ಅಭ್ಯರ್ಥಿ ಡಾ. ವಿ.ಎಸ್. ಸಾಧುನವರ, ಮಾಜಿ ಶಾಸಕ ಫಿರೋಜ್ ಸೇಠ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಶಿವಕಾಂತ ಸಿದ್ನಾಳ ಇನ್ನಿತರರು ಬರಮಾಡಿಕೊಂಡರು.

Comments