UK Suddi
The news is by your side.

ಮತದಾನಕ್ಕೆ ಕೊಂಡೊಯ್ಯಬೇಕಾದ ದಾಖಲೆಗಳಿವು.

ಸಾಂದರ್ಭಿಕ ಚಿತ್ರ.

ಬೆಳಗಾವಿ:ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿ ಇರದೇ ಇದ್ದರೆ ಆಯೋಗ ಸೂಚಿಸಿರುವ ಈ 11 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಮತ ಚಲಾಯಿಸಬಹುದು.

ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ ಅಥವಾ ರಾಜ್ಯ ಸರ್ಕಾರ ಇಲ್ಲವೇ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನೀಡಿರುವ ಗುರುತಿನ ಚೀಟಿ, ಭಾವಚಿತ್ರವಿರುವ ಪಾಸ್‌ಬುಕ್, ಪಾನ್‌ಕಾರ್ಡ್, ಕಾರ್ಮಿಕ ಸಚಿವಾಲಯದ ಸ್ಮಾರ್ಟ್ ಕಾರ್ಡ್, ನರೇಗಾ ಜಾಬ್‌ಕಾರ್ಡ್, ಇಎಸ್‌ಐ ಆರೋಗ್ಯ ವಿಮೆ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಆಧಾರ ಕಾರ್ಡ್ ಅಥವಾ ಸಂಸದರು, ಶಾಸಕರಿಗೆ ನೀಡಿರುವ ಗುರುತಿನ ಚೀಟಿ ಬಳಸಬಹುದಾಗಿದೆ.

Comments