UK Suddi
The news is by your side.

ಕುಂದಗೋಳ ಉಪಚುನಾವಣೆ ಡಿಕೆಶಿಗೆ ಯಾವುದೇ ಜವಾಬ್ದಾರಿ ನೀಡಿಲ್ಲ: ದಿನೇಶ್ ಗುಂಡುರಾವ್ ಸ್ಪಷ್ಟನೆ.

ಕುಂದಗೋಳ: ಕುಂದಗೋಳ ಉಪಚುನಾವಣೆ ಜವಾಬ್ದಾರಿಯನ್ನು ಡಿ.ಕೆ.ಶಿವಕುಮಾರಗೆ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ ಸ್ಪಷ್ಟಪಡಿಸಿದ್ದಾರೆ.

ಕುಂದಗೋಳ ಉಪಚುನಾವಣೆಗೆ ದೋಸ್ತಿ ಅಭ್ಯರ್ಥಿ ಕುಸುಮಾ ಶಿವಳ್ಳಿ ನಾಮಪತ್ರ ಸಲ್ಲಿಕೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದರು.

ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಒಗ್ಗೂಡಿ ದೋಸ್ತಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು ಎಂದರು.

Comments