UK Suddi
The news is by your side.

ಬಿಗ್ ಬ್ರೆಕಿಂಗ್: SSLC ಫಲಿತಾಂಶ ಪ್ರಕಟ, ಹಾಸನ ಜಿಲ್ಲೆ ಫಸ್ಟ್…!

ಬೆಂಗಳೂರು: 2018-19 ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ.73.2 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇಬ್ಬರು ವಿದ್ಯಾರ್ಥಿಯನಿಯರು ಶೇ. 100 ಫಲಿತಾಂಶ ಗಳಿಸಿದ್ದಾರೆ. 11 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಈ ವರ್ಷ ಶೇ. 79.59 ವಿದ್ಯಾರ್ಥಿನಿಯರು ಹಾಗೂ ಶೇ. 68.46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಗರ ಪ್ರದೇಶದ ಶೇ.70.05 ಹಾಗೂ ಗ್ರಾಮೀಣ ಪ್ರದೇಶದ ಶೇ. 76.62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

593 ಸರಕಾರಿ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. 46 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

Comments