UK Suddi
The news is by your side.

ಬರ ಪರಿಹಾರಕ್ಕಾಗಿ ಸಿಎಂ ಕುಮಾರಸ್ವಾಮಿ ಅವರಿಂದ ಶೃಂಗೇರಿಯಲ್ಲಿ ವಿಶೇಷ ಪೂಜೆಗೆ ನಿರ್ಧಾರ.

ಬೆಂಗಳೂರು: ರಾಜ್ಯದಲ್ಲಿ ಆವರಿಸಿದ ಬರಗಾಲದ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶೇಷ ಪೂಜೆ ಮತ್ತು ಯಜ್ಞಗಳ ಮೂಲಕ ವರುಣನ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳಲ್ಲಿದೆ ಎಂದು ಖ್ಯಾತ ಜ್ಯೋತಿಷಿ ದ್ವಾರಕನಾಥ್ ಮುಖ್ಯಮಂತ್ರಿಗೆ ತಿಳಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೈಗಾ, ಶೃಂಗೇರಿ ಹಾಗೂ ಮತ್ತಿತರ ಕಡೆಗಳಲ್ಲಿ ಪೂಜೆ ನಡೆಸಲು ನಿರ್ಧರಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಕೈಗಾದಲ್ಲಿ ವಿಶೇಷ ಪೂಜೆ ಮಾಡಿದ್ದರೆ ಭಾರೀ ಮಳೆಯಾಗಲಿದೆ ಎಂಬ ಸಲಹೆ ಮೇರೆಗೆ ಅಲ್ಲಿ ಪೂಜೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Comments